Tag: Bantwal

  • ಪಿಎಸ್‌ಐ ಕೀರಪ್ಪ ಘಟಕಾಂಬ್ಳೆ ಆತ್ಮಹತ್ಯೆ

    ಬಂಟ್ವಾಳ/ಶಿರಸಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ (ಪಿಎಸ್‌ಐ) ಸೇವೆ ಸಲ್ಲಿಸುತ್ತಿದ್ದ ಕೀರಪ್ಪ ಘಟಕಾಂಬ್ಳೆ ಅವರು ತಾವು ತಂಗಿದ್ದ ವಸತಿಗೃಹದ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

    ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದವರಾದ 45 ವರ್ಷದ ಕೀರಪ್ಪ ಘಟಕಾಂಬ್ಳೆ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದ ಅವರು, ಈ ಹಿಂದೆ ಮುಂಡಗೋಡ, ಶಿರಸಿ ಗ್ರಾಮೀಣ ಮತ್ತು ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್‌ಐ) ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.

    ಕಳೆದ ಎಂಟು ತಿಂಗಳ ಹಿಂದಷ್ಟೇ ಅವರಿಗೆ ಪಿಎಸ್‌ಐ ಆಗಿ ಪದೋನ್ನತಿ ದೊರೆತಿತ್ತು. ಪದೋನ್ನತಿಗೊಂಡ ನಂತರ ಅವರು ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಕುಟುಂಬವನ್ನು ಶಿರಸಿಯಲ್ಲಿಯೇ ಬಿಟ್ಟು, ಘಟಕಾಂಬ್ಳೆ ಅವರು ಬಂಟ್ವಾಳದಲ್ಲಿ ವಾಸವಾಗಿದ್ದರು.

    ಅವರ ಆತ್ಮಹ*ತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಸೇರಿದಂತೆ ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಮತ್ತು ಹಳಿಯಾಳ ಹಾಗೂ ಶಿರಸಿಯಲ್ಲಿರುವ ಸ್ನೇಹಿತರ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕ ಮನೆ ಮಾಡಿದೆ. ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

    ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ಆರಂಭಿಸಿದ್ದಾರೆ

  • ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ – ಹತ್ತನೇ ಆರೋಪಿಯನ್ನು ವಶಕ್ಕೆ

    ಬಂಟ್ವಾಳ, ಜುಲೈ 12, 2025: ಕೊಲತ್ತಮಜಲಿನ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿಯ ಮೇಲಿನ ದಾಳಿಗೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮೀಣ ಪೊಲೀಸರು ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ಈ ವರ್ಷದ ಮೇ 27 ರಂದು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕ್ರೈಂ ಸಂಖ್ಯೆ 54/2025 ರಡಿ ದಾಖಲಾದ ಪ್ರಕರಣದಲ್ಲಿ, ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 191(1), 191(2), 191(3), 118(1), 118(2), 109, 103 ಜೊತೆಗೆ 190 ರಡಿ ಒಟ್ಟು ಒಂಬತ್ತು ಜನ ಆರೋಪಿಗಳನ್ನು ಈಗಾಗಲೇ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

    ತನಿಖೆ ಮುಂದುವರೆದಂತೆ, ಶನಿವಾರ, ಜುಲೈ 12 ರಂದು ಬಂಟ್ವಾಳದ ಪುಡು ಗ್ರಾಮದ ನಿವಾಸಿ ಪ್ರದೀಪ್ (34) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಸದ್ಯ ವಿಚಾರಣೆಗೆ ಒಳಪಡಿಸಲಾಗಿದೆ.

    ತನಿಖೆಯು ಇನ್ನೂ ನಡೆಯುತ್ತಿದ್ದು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ದೃಢಪಡಿಸಿದ್ದಾರೆ.

  • ಬಂಟ್ವಾಳ: ಯುವತಿಗೆ ಚೂರಿ ಇರಿದ ಬಳಿಕ ಯುವಕ ಆತ್ಮಹತ್ಯೆ

    ಬಂಟ್ವಾಳ, ಜುಲೈ 7, 2025: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿ ಸೋಮವಾರ ಸಂಭವಿಸಿದೆ.

    ಮೃತ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್(30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ಗುರುತಿಸಲಾಗಿದೆ.

    ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿದುಬಂದಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸಹ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ. ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರುತ್ತದೆ ಎನ್ನಲಾಗಿದ್ದು, ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿದ್ದಿದ್ದು, ಇದನ್ನು ನೋಡಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ದಿವ್ಯಾಳ ಬಾಡಿಗೆ ಮನೆಗೆ ತೆರಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ, ಮತ್ತೊರ್ವ ಆರೋಪಿ ಬಂಧನ

    ಬಂಟ್ವಾಳ (ಜೂ. 30) ಮಂಗಳೂರಿನಲ್ಲಿ ಸೃಷ್ಟಿಯಾಗಿದ್ದ ಆತಂಕ ವಾತಾವರಣ ತಿಳಿಯಾಗುತ್ತಿದೆ. ಆದರೆ ಹ-ತ್ಯೆ ಪ್ರಕರಣದ ತನಿಖೆ ಆರೋಪಿಗಳ ಆತಂಕ ಹೆಚ್ಚಿಸಿದೆ.ರೌಡಿ ಶೀಟರ್ ಸುಹಾಶ್ ಶೆಟ್ಟಿ ಹತ್ಯೆಯಿಂದ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀಕಾರ, ದ್ವೇಷ ಭಾಷಣ ಸೇರಿದಂತೆ ಹಲವು ಸಂಘರ್ಷದ ಸನ್ನಿವೇಶಗಳು ಸೃಷಿಯಾಗಿತ್ತು. ಇದರ ನಡುವೆ ಬಂಟ್ವಾಳದ ಅಬ್ದುಲ್ ರೆಹಮಾನ್ ಹ-ತ್ಯೆಯೂ ನಡೆದಿತ್ತು. ಈ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಟ್ವಾಳ್ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

    ಕಳೆದ ಮೇ.27ರಂದು ನಡೆದ ಬಂಟ್ವಾಳ್ ಅಬ್ದುಲ್ ರೆಹಮಾನ್ ಹ-ತ್ಯೆ ಪ್ರಕರಣದಲ್ಲಿ ಪೊಲೀಸರು ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. 9ನೇ ಆರೋಪಿ ಬಂಟ್ವಾಳದ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್. 33 ವರ್ಷದ ಶಿವಪ್ರಸಾದ್ ಹ-ತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿ ಶಿವಪ್ರಸಾದ್ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಯನ್ನು ಪೋಲಿಸ್ ಕಸ್ಟಡಿಗೆ ನೀಡಿದೆ.

  • ಬಂಟ್ವಾಳ: ಜೀಪು ಚಾಲಕನ ಮೇಲೆ ತಲವಾರು ದಾಳಿಗೆ ಯತ್ನ; ದೂರು ದಾಖಲು

    ಬಂಟ್ವಾಳ, ಜೂ. 13: ಜೀಪಿನಲ್ಲಿ ಹೋಗುತ್ತಿದ್ದ ಚಾಲಕರೊಬ್ಬರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ತಲವಾರಿನಿಂದ ದಾಳಿಗೆ ಯತ್ನಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇರಾಜೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸಜೀಪ ಮುನ್ನೂರು ನಿವಾಸಿ ಉಮ್ಮರ್ ಫಾರೂಕ್ ಎಂಬವರು ದೂರು ನೀಡಿದ್ದಾರೆ. ಫಾರೂಕ್ ಜೂನ್ 11 ರಂದು ಮನೆಯಿಂದ ಮುಂಜಾನೆ ದೇರಳಕಟ್ಟೆ ಕಡೆಗೆ ಜೀಪಿನಲ್ಲಿ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಕಡೆಗೆ ತಲುಪುತ್ತಿದ್ದಂತೆ ರಸ್ತೆಯಲ್ಲಿ ವಿರುದ್ದ ದಿಕ್ಕಿನಿಂದ ಇಬ್ಬರು ಅಪರಿಚಿತರು ಬೈಕಿನಲ್ಲಿ ಬಂದು ಹಿಂಬದಿಯ ಸವಾರ ತಲವಾರಿನಿಂದ ಬೀಸಿದ್ದಾನೆ.

    ಘಟನೆಯಿಂದ ಜೀಪಿನ ಸೈಡ್ ಮಿರರ್ ಒಡೆದಿರುತ್ತದೆ ಎಂದು ಫಾರೂಕ್ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

  • Tragic Drowning at Karinja Temple Lake Claims College Student’s Life

    Bantwal, June 07, 2025: A heartbreaking incident occurred on Saturday morning when a college student drowned in Gada Theertha Lake near the sacred Karinja Temple in Bantwal taluk.

    The victim, Chethan (19), son of Sridhar Mulya from Kangitthilu near Wagga Karinja Cross, was a student at B Mooda Government Pre-University College, Bantwal. Known for his devotion, Chethan visited the Karinja Temple every Saturday to offer prayers. On the day of the incident, he had gone to the temple with his friend Prashvit. While descending the steps to wash his feet in the temple’s lake, Chethan slipped and fell into the water.

    Prashvit, unable to swim, raised an alarm for help. Local residents, including Shravan Jain and Udaya Mangaje, responded swiftly and dove into the lake to rescue him. Despite their efforts to locate and retrieve Chethan, he was unresponsive by the time he was brought out of the water and was declared deceased.

    The Bantwal Rural police have visited the site and are conducting an investigation into the incident.

    Chethan’s untimely death has left the local community, particularly his fellow students and temple devotees, in deep sorrow.

  • ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

    ಬಂಟ್ವಾಳ, ಮೇ 30, 2025: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಅವರ ಮೇಲಿನ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಶುಕ್ರವಾರ (ಮೇ 30) ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಮತ್ತು ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ, ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ ಪೂಜಾರಿ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರದ ಪೃಥ್ವಿರಾಜ್ ಜೋಗಿ (21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ.

  • ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ: ಕುಟುಂಬಕ್ಕೆ ಭೇಟಿ ನೀಡಿದ ಎಸ್‌ಡಿಪಿಐ; ಸರ್ಕಾರಕ್ಕೆ ಮೂರು ಬೇಡಿಕೆ

    ಮಂಗಳೂರು, ಮೇ 30, 2025: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ರಾಜ್ಯ ಸರ್ಕಾರದಿಂದ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

    ಅಬ್ದುಲ್ ಮಜೀದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡು, ಈ ಹತ್ಯೆ ಪ್ರಕರಣದ ತನಿಖೆಗಾಗಿ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ, ಬಜಪೆ ಕಾರ್ಯಕ್ರಮದಲ್ಲಿ ಈ ಘಟನೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ತಂದಿದ್ದಾರೆ.

    ಇದೇ ಸಂದರ್ಭದಲ್ಲಿ, ಹಂತಕರ ತಂಡದಿಂದ ತಲ್ವಾರ್ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯನ್ನು ಭೇಟಿ ಮಾಡಿದ ಅಬ್ದುಲ್ ಮಜೀದ್ ಮತ್ತು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜೆತೂರ್, ಅವರು, ಆತನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

  • ಕೊಳತ್ತಮಜಲು ಮಸೀದಿಯ ಆವರಣದಲ್ಲಿ ಅಬ್ದುಲ್ ರಹ್ಮಾನ್‌ರ ಅಂತ್ಯಕ್ರಿಯೆ

    ಮಂಗಳೂರು, 28 ಮೇ,2025: ಮಂಗಳವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಅವರ ಅಂತಿಮ ಸಂಸ್ಕಾರವು ಬುಧವಾರ ಕುರಿಯಾಳ ಗ್ರಾಮದ ಇರಾಕೋಡಿಯ ಮಸೀದಿ ಆವರಣದಲ್ಲಿ ನೆರವೇರಿತು.

    ನೂರಾರು ಜನರು ಸೇರಿ ಅಂತಿಮ ದರ್ಶನ ಪಡೆದರು. ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಪ್ರಾರಂಭಿಕ ವಿಧಿಗಳು ಮುಗಿದ ಬಳಿಕ, ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಮನೆಯವರ ಕಣ್ಣೀರಿನ ಆಕ್ರಂದನ ಮನಕಲಕಿತು. ತದನಂತರ ಅಬ್ದುಲ್ ರಹ್ಮಾನ್ ಅವರ ತಂದೆ, ತಾಯಿ, ಸಹೋದರಿ, ಪತ್ನಿ ಮತ್ತು ಸಂಬಂಧಿಕರೊಂದಿಗೆ ಸಾವಿರಾರು ಜನರು ಅಂತಿಮ ದರ್ಶನ ಮಾಡಿದರು.

  • ಕೊಳ್ತಮಜಲು ರಹೀಂ ಹತ್ಯೆ ಪ್ರಕರಣ: ದೀಪಕ್, ಸುಮಿತ್ಆಚಾರ್ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲು

    ಬಂಟ್ವಾಳ: ತಾಲೂಕಿನ ಕೊಳತ್ತಮಜಲು ಬಳಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಬ್ದುಲ್ ರಹಿಮಾನ್ ಮತ್ತು ಕಲಂದ‌ರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಧನುಪೂಜೆ ಭೋಜ ಆಚಾರ್ ಪುತ್ರ ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾ‌ರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ.

    ದುಷ್ಕರ್ಮಿಗಳ ಗುಂಪು ಕೋಮು ಭಾವನೆಯಿಂದ ಅಥವಾ ಇನ್ನಾವುದೋ ಕಾರಣಕ್ಕೆ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದು, ಕಲಂದರ್ ಶಾಫಿ ಅವರನ್ನು ತೀವ್ರವಾಗಿ ಗಾಯಗೊಳಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ. ಈ ಕೃತ್ಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು ಇತರರು ಭಾಗಿಯಾಗಿದ್ದಾರೆ ಎಂದು ದೂರುದಾರ ನಿಸಾರ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.