ಗಂಗೊಳ್ಳಿ, ಜುಲೈ 15, 2025: ನಾಡದೋಣಿ ಮಗುಚಿ ನಾಪತ್ತೆಯಾದ ಮೂವರು ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜೀ ಶಾಸಕ ಗೋಪಾಲ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಂಗೊಳ್ಳಿಯಲ್ಲಿ ನಡೆದ ಈ ದುರಂತ ತುಂಬಾ ನೋವು ತಂದಿದೆ, ಜಿಲ್ಲಾದ್ಯಂತ ಈ ತರಹದ ಘಟನೆ ಹಿಂದಿನ ದಿನಗಳಲ್ಲಿ ನಡೆದಿದೆ, ಅದರೊ ನಮ್ಮ ಜನ ಎಚ್ಚೆತ್ತುಕೊಳ್ಳದೆ, ಮಳೆಗಾಲ ಸಂದರ್ಭದಲ್ಲಿ ಮೀನುಗಾರಿಕೆಗೆ ಬ್ಯಾನ್ ಇದ್ದರೋ ಸಹ ಧ್ಯರ್ಯ ಮಾಡಿ ಜನ ಹೋಗ್ತಾ ಇದ್ದಾರೆ, ಈ ಬಗ್ಗೆ ಇಲಾಖೆ ಹಾಗು ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು , ಎಷ್ಟೇ ಲಾಭಇದ್ರೋ ಜೀವಕ್ಕಿಂದ ದೊಡ್ಡ ಲಾಭ ಮತ್ತೊಂದಿಲ್ಲ, ಪೊಲೀಸ್ ಅಧಿಕಾರಿಗಳ ಹತ್ತಿರ ಮಾತಾಡಿದ್ದೇನೆ, ಶುಕ್ರವಾರ ಮಂತ್ರಿಗಳ ಜೊತೆ ಭೇಟಿ ಕೊಟ್ಟು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಪರಾರಿಹರ ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಮೀನುಗಾರರು ನಿಷೇಧದ ಅವಧಿಯನ್ನು ಪಾಲಿಸಬೇಕೆಂದು ಮತ್ತು ಈ ಅವಧಿಯಲ್ಲಿ ಮೀನುಗಾರಿಕೆಗೆ ಹೋಗದಂತೆ ಅವರು ವಿನಂತಿಸಿದ್ದಾರೆ.

ಇಂದು ಬೆಳಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.

ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.
ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ಲೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.