ಗಂಗೊಳ್ಳಿ,ಜುಲೈ 15, 2025: ಆನ್ಲೈನ್ ತರಗತಿಗಳಿಗೆ ಹೋಲಿಸಿದರೆ ವಿದ್ಯಾರ್ಥಿ ಶಿಕ್ಷಕರ ನೇರ ಮುಖಾಮುಖಿ ಸಂವಹನ ಸಾಧ್ಯವಾಗುವ ಭೌತಿಕ ತರಗತಿಗಳು ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಪೂರಕವಾದ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಬದ್ಧತೆಯಿಂದ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿ ಎಸ್ ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರಿನ ಅರ್ಜುನ್ ಅಕಾಡೆಮಿಯ ಸಹಯೋಗದಲ್ಲಿ ಆರಂಭಗೊಂಡ ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು.
ಅರ್ಜುನ್ ಅಕಾಡೆಮಿಯ ಪ್ರದೀಪ್ ಎನ್. ಎಸ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ. ಎ , ವಿಜ್ಞಾನ ವಿಭಾಗದ ಉಪನ್ಯಾಸಕಿಯರಾದ ಪವಿತ್ರ, ರಮ್ಯ ಮತ್ತು ಪಲ್ಲವಿ ಉಪಸ್ಥಿತರಿದ್ದರು. ನರೇಂದ್ರ ಎಸ್ ಗಂಗೊಳ್ಳಿ ವಂದಿಸಿದರು.