Tag: Marvanthe

  • ತ್ರಾಸಿ-ಮರವಂತೆ ಬೀಚ್‌ನಲ್ಲಿ ಸುರಕ್ಷತೆ: ಕರಾವಳಿ ಠಾಣೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಚರ್ಚೆ

    ಗಂಗೊಳ್ಳಿ: ತ್ರಾಸಿ-ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಂಗಳವಾರ ಚರ್ಚೆ ನಡೆಸಿದರು.

    ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಸಂತ ರಾಮ್ ಆಚಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿ‌ಎಸೈ ಮುಕ್ತ ಬಾಯಿ, ಎ‌ಎಸ್ಸೈ ಸಂತೋಷ್ ಕುಂದರ್ ಮತ್ತು ರಾಘವೇಂದ್ರ ದೇವಾಡಿಗ ಅವರು ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ನಿದೀಶ್ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಪ್ರವಾಸಿ ಮಿತ್ರ ಮತ್ತು ಲೈಪ್ ಗಾರ್ಡ್‌ಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.

  • ಗಂಗೊಳ್ಳಿ: ಸಮುದ್ರ ಅಲೆಗಳಿಂದ ಉಂಟಾಗುವ ಅಪಘಾತಗಳನ್ನು ತಡೆಗಟ್ಟಲು ಮರವಂತೆ ಬೀಚ್‌ನಲ್ಲಿ ಸೂಚನಾ ಫಲಕ ಅಳವಡಿಕೆ

    ಗಂಗೊಳ್ಳಿ, ಮೇ 27, 2025: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಳೆಗಾಲದಲ್ಲಿ ಸಮುದ್ರದ ಅಲೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕಗಳನ್ನು ಮತ್ತು ಕಾಷನ್ ಟೇಪ್‌ಗಳನ್ನು ಅಳವಡಿಸಲಾಗಿದೆ.

  • ತ್ರಾಸಿ -ಮರವಂತೆ ಬೀಚಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡ ತಹಸಿಲ್ದಾರ್

    ಕುಂದಾಪುರ : ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ ಹಾಗೂ ಹೊಳೆ ಸಮುದ್ರಕ್ಕೆ ಇಳಿಯದಂತೆ ಆದೇಶ ಹೊರಡಿಸಿದೆ, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ತ್ರಾಸಿ ಮರವಂತೆ ಬೀಚಿಗೆ ಬೈಂದೂರು ತಹಸಿಲ್ದಾರ್ ಭೀಮ್ ಸೇನ್ ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮರವಂತೆ ವರಹ ಸ್ವಾಮಿ ದೇವಸ್ಥಾನದ ಎದುರುಗಡೆ ಇರುವ ಬೀಚಿನಲ್ಲಿ ಒಂದಷ್ಟು ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದ ಪ್ರವಾಸಿಗರನ್ನು ಕೈಬೀಸಿ ಕರೆದು ಸಮುದ್ರದ ಅಲೆಗಳು ಹೆಚ್ಚಾಗಿರುವುದರಿಂದ ಸಮುದ್ರದಲ್ಲಿ ಹುಚ್ಚಾಟ ಮಾಡುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡು ಬುದ್ಧಿ ಮಾತು ಹೇಳಿ ಕಳಿಸಲಾಗಿದೆ.

    ತ್ರಾಸಿ ಮರವಂತೆ ಬೀಚಿನಲ್ಲಿ ಇಂತಹ ತುರ್ತು ಪರಿಸ್ಥಿತಿಯಲ್ಲಿ ಯಾರೊಬ್ಬ ಸೆಕ್ಯುರಿಟಿ ಗಾರ್ಡ್ ಇಲ್ಲದಿರುವುದು ಕಂಡು ಬಂದಿದೆ ಎನ್ನಲಾಗಿದೆ, ಈ ವೇಳೆ ಕೋಸ್ಟಲ್ ನ್ಯೂಸ್ ವರದಿಗಾರರ ಜೊತೆ ಮಾತನಾಡಿ ಮಳೆಗಾಲದ ಸಮಯದಲ್ಲಿ ತ್ರಾಸಿ ಮರವಂತೆ ಬೀಚಿನಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ, ಹಾಗೂ ಹೆಚ್ಚಿನ ಭದ್ರತೆಗಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.

  • ತ್ರಾಸಿ-ಮರವಂತೆ ಪ್ರವಾಸೋಧ್ಯಮ ಕೇಂದ್ರವಾಗಿ ಇನ್ನಷ್ಟು ಅಭಿವೃದ್ಧಿಪಡಿಸಲು ಮುತುವರ್ಜಿ ಕ್ರಮ: ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್

    ಕುಂದಾಪುರ: ಉಡುಪಿ ಜಿಲ್ಲೆ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಪೂರಕವಾಗಿದೆ. ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ‌ ಮದ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ‌ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.

    ಗುರುವಾರ ಸಂಜೆ ತ್ರಾಸಿ- ಮರವಂತೆ ಸಮುದ್ರ ತೀರ ವೀಕ್ಷಣೆ ಬಳಿಕ ಅವರು ಇಲ್ಲಿನ ಅಭಿವೃದ್ಧಿ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.

    ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತೃದ ಕೊಲ್ಲೂರು ಸಹಿತ ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಯ ಕುರಿತು ತಿಂಗಳಿನ ಹಿಂದೆ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. ‘ಸಾಸಿ’ ಎನ್ನುವ ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಗುರುವಾರ ಕೇಂದ್ರ ಮಂತ್ರಿಗಳು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ನಿರೀಕ್ಷೆಯಿದೆ ಎಂದರು.

    ಇದಕ್ಕೂ ಮೊದಲು ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಆರಂಭಗೊಂಡ ಸ್ಕೈ ಡೈನಿಂಗ್ ಏರಿದರು.

    ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು.