ಕಾರ್ಕಳ: ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ರಾಥೋತ್ಸವ ಕಾರ್ಯಕ್ರಮ ನಡೆಯಲಿರುವುದರಿಂದ ದಿನಾಂಕ 02-05-2025 ರಂದು ಸಂಜೆ 4:00 ಗಂಟೆಯಿಂದ ಮರುದಿನ ಬೆಳಿಗ್ಗೆ 6:00 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜುಂಕ್ಷನ್ ರವರೆಗೆ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಸಂಚಾರ ವ್ಯವಸ್ಥೆ ಬಗ್ಗೆ ಈ ಕೆಳಗಿನ ಆದೇಶ ಹೊರಡಿಸಿದ್ದಾರೆ.
ಪರ್ಯಾಯ ಮಾರ್ಗದ ವಿವರ
- ಘನವಾಹನಗಳು ಬಂಗ್ಲೆ ಗುಡ್ಡೆ – ಹಿರಿಯಂಗಡಿ – ಪುಲ್ಕೆರಿ ಮಾರ್ಗವಾಗಿ ಸಂಚರಿಸುದು.
- ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ ಗಳು ತಾಲೂಕು ಜುಂಕ್ಷನ್ ನಿಂದ ಕಲೊಟ್ಟೆ , ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸುವುದು.
- ಸ್ಟೇಟ್ ಬ್ಯಾಂಕ್ – ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಹಾಗೂ ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜುಂಕ್ಷನ್ ನಿಂದ ಗಾಂಧಿ ಮೈದಾನವಾಗಿ ಅಂಚೆ ಕಚೇರಿ, ಕಾಮಧೇನು ಹೋಟೆಲ್ ಜುಂಕ್ಷನ್ ಮಾರ್ಗವಾಗಿ ಸಂಚರಿಸುದು.
ಸಾರ್ವಜನಿಕರಲ್ಲಿ ಸಹಕರಿಸಲು ಉಡುಪಿ ಪೊಲೀಸ್ ವಿನಂತಿಸಿದ್ದಾರೆ.