ಉಡುಪಿ, ಜುಲೈ 8, 2025: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಚೆನ್ನೈ, ಜುಲೈ 8, 2025: ತಮಿಳುನಾಡಿನ ಕಡಲೂರು ಬಳಿ ಸೆಮ್ಮಂಕುಪ್ಪಂನಲ್ಲಿ ಭಾನುವಾರ, ಜುಲೈ 8 ರಂದು ಮಧ್ಯಾಹ್ನ 12:04 ಗಂಟೆಯ ಸುಮಾರಿಗೆ ಶಾಲಾ ವಾಹನಕ್ಕೆ ರೈಲು ಢಿಕ್ಕಿ ಹೊಡೆದ ದುರ್ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಸಂತಾಪ ಮೂಡಿಸಿದೆ.
ವರದಿಗಳ ಪ್ರಕಾರ, ತೆರೆದ ರೈಲ್ವೆ ಗೇಟ್ ದಾಟುತ್ತಿದ್ದಾಗ ಶಾಲಾ ವ್ಯಾನ್‌ಗೆ ರೈಲು ಢಿಕ್ಕಿ ಹೊಡೆದು, ವಾಹನವನ್ನು ಸುಮಾರು 50 ಮೀಟರ್ ದೂರಕ್ಕೆ ಎಳೆದೊಯ್ದಿದೆ. ಘಟನೆ ಸಮಯದಲ್ಲಿ ವಾಹನದಲ್ಲಿ ಐವರು ವಿದ್ಯಾರ್ಥಿಗಳು ಮತ್ತು ಚಾಲಕ ಇದ್ದರು. ಇಬ್ಬರು ವಿದ್ಯಾರ್ಥಿಗಳ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಒಬ್ಬ ವಿದ್ಯಾರ್ಥಿ ಚಿಕಿತ್ಸೆ ಆರಂಭವಾದ ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಗಾಯಗೊಂಡ ಇತರ ವಿದ್ಯಾರ್ಥಿಗಳನ್ನು ಕಡಲೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಈ ದುರ್ಘಟನೆಯ ಬಗ್ಗೆ ಜಂಟಿ ತನಿಖೆಯನ್ನು ಆರಂಭಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಲು ಸಮೀಪಿಸುತ್ತಿದ್ದಂತೆ ಗೇಟ್ ಕೀಪರ್ ಗೇಟ್ ಮುಚ್ಚಲು ಯತ್ನಿಸಿದಾಗ, ವ್ಯಾನ್ ಚಾಲಕ ದಿಢೀರ್ ರೈಲ್ವೆ ಹಳಿಯನ್ನು ದಾಟಲು ಮುಂದಾಗಿದ್ದು, ಇದು ಅಪಘಾತಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ.
ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಕನ್ನಡ ಮಾಧ್ಯಮ ಹಳೆ ವಿದ್ಯಾರ್ಥಿಗಳ ಸಂಘ, ಗಂಗೊಳ್ಳಿಯ ನೂತನ ಅಧ್ಯಕ್ಷೆಯಾಗಿ ಫಿಲೋಮಿನಾ ಫೆರ್ನಾಂಡಿಸ್ ಹಾಗೂ ಉಪಾಧ್ಯಕ್ಷರಾಗಿ ಝಹೀರ್ ಅಹ್ಮದ್ ನಾಖುದಾ ಆಯ್ಕೆಯಾಗಿದ್ದಾರೆ.
ಹಳೆ ವಿದ್ಯಾರ್ಥಿಗಳ ಸಂಘವು ಅವರಿಬ್ಬರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ.
ಗಂಗೊಳ್ಳಿ, ಮೇ 22, 2025 : ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್ ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಸದಸ್ಯರುಗಳಾದ ಆನಂದ ಬಿಲ್ಲವ ಹಾಗು ರಾಮಚಂದ್ರ ಜಿ. ಉಪಸ್ಥಿತರಿದ್ದರು.
ಉಡುಪಿ, ಮೇ 15 : ಜಿಲ್ಲೆಯ ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವಿದೆ. ಈ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ, ಮುಂಗಟ್ಟುಗಳ ಪರವಾನಿಗೆ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೋಟ್ಪಾ ಕಾಯಿದೆ ಅನ್ವಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ ಸಹ ಜಿಲ್ಲೆಯ 38 ಶಾಲಾ-ಕಾಲೇಜುಗಳ ನಿಷೇಧಿತ ವ್ಯಾಪ್ತಿಯಲ್ಲಿಯೇ ಇವುಗಳ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳೂ ಕೇಳಿ ಬಂದಿವೆ. ಈ ಬಗ್ಗೆ ಕೂಡಲೇ ಕ್ರಮವಹಿಸಬೇಕು. ಈಗಾಗಲೇ ಮಣಿಪಾಲದ 11, ಬೈಂದೂರಿನ ತಾಲೂಕಿನ 1 ಕಡೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಲೈಸೆನ್ಸ್ಗಳನ್ನು ರದ್ದುಪಡಿಸಲಾಗಿದೆ. ಬಾಕಿ ಉಳಿದ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೆ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಜಿಲ್ಲೆಯ ಉಳಿದ ಗ್ರಾಮಗಳಲ್ಲಿಯೂ ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹಕರಿಸಬೇಕು ಎಂದ ಅವರು, ಜಿಲ್ಲೆಯ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚು ಮನೆಗಳಿದ್ದು, ಅವುಗಳನ್ನು ತಂಬಾಕು ಮುಕ್ತ ಅಪಾರ್ಟ್ಮೆಂಟ್ಗಳೆಂದು ಘೋಷಿಸಲಾಗುತ್ತಿದೆ. ಈಗಾಗಲೇ ಉಡುಪಿ ತಾಲೂಕಿನ ಕ್ಲಾಸಿಕಲ್ ನೆಸ್ಟ್, ಕಾರ್ಕಳದ ಪಂಚಮಿ ರೆಸಿಡೆನ್ಸಿ ಮತ್ತು ಗಂಗಾ ಪ್ಯಾರಡೈಸ್ಗಳನ್ನು ತಂಬಾಕು ಮುಕ್ತ ಅಪಾರ್ಟ್ಮೆಂಟ್ಗಳೆಂದು ಘೋಷಿಸಿ, ಪ್ರಮಾಣಪತ್ರ ನೀಡಲಾಗಿದೆ ಎಂದರು.
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಪ್ರತ್ಯೇಕ ಪರವಾನಿಗೆಯನ್ನು ಹೊಂದಿರಬೇಕು. ತಂಬಾಕಿನಂತಹ ಉತ್ಪನ್ನಗಳ ಬಳಕೆಯು ಮಕ್ಕಳ ಜೀವನವನ್ನೇ ಹಾಳುಮಾಡುವುದರಿಂದ ಇವುಗಳ ಬಳಸದಂತೆ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದ ಅವರು, ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.
ಜಿಲ್ಲೆಯಲ್ಲಿ 2025 ರ ಏಪ್ರಿಲ್ ಮಾಹೆಯಲ್ಲಿ 5 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ), 6(ಬಿ) ಅಡಿಯಲ್ಲಿ 71 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 11,400 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 11 ಪ್ರಕರಣಗಳಿಂದ 1100 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ದಾಳಿಗಳನ್ನು ನಿರಂತರವಾಗಿ ಆಗಿಂದಾಗ್ಗೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಗುಜ್ಜಾಡಿ 15/05/2025: ಇಲ್ಲಿನ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ (ರಿ) ವತಿಯಿಂದ “ರಜತ ಸಂಭ್ರಮ 2025”, ಮೇ 17 ಮತ್ತು 18 ಕ್ಕೆ ಆಯೋಜಿಸಲಿದೆ.
ಹಳೆ ವಿದ್ಯಾರ್ಥಿ ಸಂಘವು (ರಿ) ವಾರ್ಷಿಕೋತ್ಸವ ಅಥವಾ ಕಾರ್ಯಕ್ರಮ ಮಾಡುವುದಕ್ಕೆ ಮಾತ್ರ ಸೀಮಿತವಾಗಿರದೆ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಂತಿದೆ.
ಶಾಲಾ ಅಭಿವೃದ್ಧಿಗೆ ಮಹತ್ವದ ಸಹಕಾರ:
ಶಾಲೆಗೆ ಪೂರ್ವ ಪ್ರಾಥಮಿಕ ತರಗತಿಯಾಗಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಹಳೆ ವಿದ್ಯಾರ್ಥಿ ಸಂಘವೇ ಸುಸಜ್ಜಿತವಾಗಿ ಆರಂಭಿಸಿ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದು ಸಂಘದ ಗೌರವಾಧ್ಯಕ್ಷರು ತಿಳಿಸಿದ್ದಾರೆ.
ಸಂಘದ ಇತಿಹಾಸ:
ಹಳೆ ವಿದ್ಯಾರ್ಥಿ ಸಂಘವು 1999ರಲ್ಲಿ ಸ್ಥಾಪನೆಯಾಗಿ ಅಂದಿನಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಗೌರವಾಧ್ಯಕ್ಷರಾದ ಏ.ಆರ್. ವಲೀಯುಲ್ಲಾ ಗಂಗೊಳ್ಳಿ ನ್ಯೂಸ್‌ಗೆ ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಗಳು:
ಮಕ್ಕಳ ತರಬೇತಿ ಶಿಬಿರಗಳು, ಆರೋಗ್ಯ ಶಿಬಿರಗಳು, ಅನಾರೋಗ್ಯ ಪೀಡಿತರಿಗೆ ಧನ ಸಹಾಯ, ವಿದ್ಯಾರ್ಥಿಗಳಿಗೆ ಅನುದಾನ, ಪಠ್ಯಪುಸ್ತಕ ಹಾಗೂ ಬೇಸಿಕ್ ಸೌಲಭ್ಯಗಳ ಒದಗಿಸುವಲ್ಲಿ ಸಂಘವು ಮಂಚೂಣಿಯಲ್ಲಿದೆ.
ಕಾರ್ಯಕ್ರಮದ ವಿವರಗಳು:
17-05-2025 ಬೆಳಿಗ್ಗೆ 10:00 ಗಂಟೆಗೆ: ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ ಉಡುಪಿಯ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
17-05-2025 ಸಂಜೆ 7:00 ಗಂಟೆಗೆ: ನೂತನ ಕೊಠಡಿಗಳ ಉದ್ಘಾಟನೆ, ಸ್ಮರಣಾ ಸಭೆ ಮತ್ತು ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
18-05-2025: “ಗುರುವಂದನೆ” ಕಾರ್ಯಕ್ರಮದ ಭಾಗವಾಗಿ ಗುರುಗಮನ, ಮತ್ತು ಕಲಾಸ್ಪೂರ್ತಿ ಹವ್ಯಾಸಿ ನಾಟಕ ತಂಡದ “ದೈವ ಸಂಕಲ್ಪ” ನಾಟಕ ಪ್ರದರ್ಶನ ನಡೆಯಲಿದೆ.
ಆಹ್ವಾನ:
ಈ ವಿಶೇಷ ಕಾರ್ಯಕ್ರಮಕ್ಕೆ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಎ.ಆರ್. ವಾಲೀಯುಲ್ಲಾ, ಅಧ್ಯಕ್ಷ ಶ್ರೀ ರಾಮನಾಥ ಚಿತ್ತಾಲ್, ಪ್ರಧಾನ ಕಾರ್ಯದರ್ಶಿ ಶ್ರೀ ರಾಘವೇಂದ್ರ ಡಿ., ಕೋಶಾಧಿಕಾರಿ ಪ್ರಕಾಶ್ ಎನ್. ಮೇಸ್ತ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಗ್ರಾಮಸ್ಥರು ಆತ್ಮೀಯವಾಗಿ ಆಹ್ವಾನಿಸುತ್ತಾರೆ.
We are sharing the following unedited statement issued by the Institution.
below is the statement in full.
As a platform committed to responsible journalism, we acknowledge the prompt action taken by the school and welcome the decision to initiate an independent investigation.
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.
ಈಕೆಗೆ 623 ಅಂಕಗಳು ಬಂದಿದ್ದವು. ಬಿ. ವಿ. ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4 ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 621 ಅಂಕಗಳೊಂದಿಗೆ ಐದನೇ, ಸನ್ವಿತ್ ಶೆಟ್ಟಿ 620 ಅಂಕಗಳೊಂದಿಗೆ 6ನೇ , ಸಮನ್ವಿ ಎಸ್. 618 ಅಂಕಗಳೊಂದಿಗೆ 8 ನೇ, ಮತ್ತು ಅನ್ವಿತ್ ಕೆ. 616 ಅಂಕಗಳೊಂದಿಗೆ 10 ನೇ ರ್‍ಯಾಂಕ್ ಗಳಿಸಿದ್ದಾರೆ.
ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್‍ಯಾಂಕ್‌ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ತಿಳಿಸಿದ್ದಾರೆ.
ಕುಂದಾಪುರ: ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ಬೆಂಗಳೂರು, ಮೇ. 01:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.