ಕಾಪು ಮೇ 31, 2025: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಕ್ತ ಸಂಗ್ರಹ ನಿಧಿಗಳಲ್ಲಿ ತೀವ್ರ ರಕ್ತದ ಕೊರತೆ ಇರುವುದನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತ ಸಂಗ್ರಹ ನಿಧಿಯ ಸಹಯೋಗದೊಂದಿಗೆ ದಿನಾಂಕ 01/06/2025 ರ ಆದಿತ್ಯವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಕಾಪುವಿನ ಮಜೂರ್ ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ಉಡುಪಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಹಾಗೆ ರಕ್ತದ ಪೂರೈಕೆಯಾಗುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಕೊರತೆಯಿಂದಾಗಿ ಬೇಡಿಕೆಯಷ್ಟು ರಕ್ತ ಪೂರೈಕೆಯಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ದಿನಂಪ್ರತಿ 40-60 ಯೂನಿಟ್ ರಕ್ತದ ಅವಶ್ಯಕತೆ ಇದ್ದು ಆದರೆ ರಕ್ತಸಂಗ್ರಹ ನಿಧಿಯಲ್ಲಿ ಅಷ್ಟು ಪ್ರಮಾಣದ ರಕ್ತದ ಸಂಗ್ರಹವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ನಾಳೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಕೈಜೋಡಿಸಬೇಕೆಂದು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ ಪಿ ಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ