ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವಿದ್ಯಾರ್ಥಿನಿ ಕೂಡ ಸೇರ್ಪಡೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾಳೆ.
Tag: sslc
-
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಕಾರ್ಕಳದ ಸ್ವಸ್ತಿ ಕಾಮತ್ ಗೆ 625 ಕ್ಕೆ 625 ಅಂಕ !
-
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ
ಬೆಂಗಳೂರು, ಮೇ. 02:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದಾರೆ . ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
2024-25 ಸಾಲಿನ ಫಾಲಿತಾಂಶ 65.14% ರೆಗ್ಯುಲರ್ ಫ್ರೆಷೆರ್ಸ್ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸೇರಿ (ಮರು ಪರೀಕ್ಷೆ, ಪ್ರೈವೇಟ್ ) 62.34% ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
2024-2025 ಸಾಲಿನಲ್ಲಿ 22 ವಿದ್ಯಾರ್ಥಿಗಳು 625/625 ಮಾರ್ಕ್ಸ್ ತಕೊಂಡಿದ್ದಾರೆ.
ಮರು ಪರೀಕ್ಷಣೆ (re-evaluvation) ಗೆ ಅರ್ಜಿ ಈ ಬಾರಿ android ಆಪ್ ಮೂಲಕ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದೆ.
ಮರು ಎಕ್ಸಾಮ್ (2nd re-exam) 26-05-2025 – 02-06-2025 ವರೆಗೆ ನಡೆಯಲಿದೆ .
ಮೂರನೇ ಎಕ್ಸಾಮ್ (3rd re-exam) 23-06-2025 – 03-06-2025 ವರೆಗೆ ನಡೆಯಲಿದೆ ಅಂತ ಮಧು ಬಂಗಾರಪ್ಪ ಪತ್ರಿಕಾಘೋಷ್ಟಿಯೆಲ್ಲಿ ಹೇಳಿದ್ದಾರೆ.
ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಪಡೆದ ಉಡುಪಿ ಜಿಲ್ಲೆ
625 ಮಾರ್ಕ್ಸ್ ತಕೊಂಡವರು – 22 ವಿದ್ಯಾರ್ಥಿಗಳು