Tag: Suicide

  • ಪಿಎಸ್‌ಐ ಕೀರಪ್ಪ ಘಟಕಾಂಬ್ಳೆ ಆತ್ಮಹತ್ಯೆ

    ಬಂಟ್ವಾಳ/ಶಿರಸಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ (ಪಿಎಸ್‌ಐ) ಸೇವೆ ಸಲ್ಲಿಸುತ್ತಿದ್ದ ಕೀರಪ್ಪ ಘಟಕಾಂಬ್ಳೆ ಅವರು ತಾವು ತಂಗಿದ್ದ ವಸತಿಗೃಹದ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

    ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದವರಾದ 45 ವರ್ಷದ ಕೀರಪ್ಪ ಘಟಕಾಂಬ್ಳೆ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದ ಅವರು, ಈ ಹಿಂದೆ ಮುಂಡಗೋಡ, ಶಿರಸಿ ಗ್ರಾಮೀಣ ಮತ್ತು ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್‌ಐ) ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.

    ಕಳೆದ ಎಂಟು ತಿಂಗಳ ಹಿಂದಷ್ಟೇ ಅವರಿಗೆ ಪಿಎಸ್‌ಐ ಆಗಿ ಪದೋನ್ನತಿ ದೊರೆತಿತ್ತು. ಪದೋನ್ನತಿಗೊಂಡ ನಂತರ ಅವರು ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಕುಟುಂಬವನ್ನು ಶಿರಸಿಯಲ್ಲಿಯೇ ಬಿಟ್ಟು, ಘಟಕಾಂಬ್ಳೆ ಅವರು ಬಂಟ್ವಾಳದಲ್ಲಿ ವಾಸವಾಗಿದ್ದರು.

    ಅವರ ಆತ್ಮಹ*ತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಸೇರಿದಂತೆ ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಮತ್ತು ಹಳಿಯಾಳ ಹಾಗೂ ಶಿರಸಿಯಲ್ಲಿರುವ ಸ್ನೇಹಿತರ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕ ಮನೆ ಮಾಡಿದೆ. ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

    ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ಆರಂಭಿಸಿದ್ದಾರೆ

  • ರಕ್ತದಲ್ಲಿ ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆ!..

    ವಿಜಯಪುರ, ಜುಲೈ 7, 2025: 9ನೇ ತರಗತಿ ವಿದ್ಯಾರ್ಥಿಯೊಬ್ಬ ರಕ್ತದಲ್ಲಿ ಡೆತ್ ನೋಟ್ ಬರೆದಿಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಖಾಸಗಿ ಶಾಲೆಯ ಬಳಿಯ ಜಮೀನಿನ ಪಕ್ಕದಲ್ಲೇ ಮರದ ಕೆಳಗೆ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಮಡಿವಾಳಪ್ಪ ಚಬನೂರ (15) ಮೃತ ವಿದ್ಯಾರ್ಥಿ. ಬೋರಗಿ ಗ್ರಾಮದ ನಿವಾಸಿ.

    ಮಡಿವಾಳಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಕಷರಿಗೆ ಮಾಹಿತಿ ನೀಡಿರೋ ಶಾಲಾ ಆಡಳಿತ ಮಂಡಳಿ. ಇದು ಆತ್ಮಹತ್ಯೆಯಲ್ಲಾ ಕೊಲೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ.

    ಮೃತ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನೋಟ್ ಬುಕ್ ಪೇಜ್ ನಲ್ಲಿ ರಕ್ತದಲ್ಲಿ ಬರೆದಿರೋ ನೋಟ್ ಪತ್ತೆಯಾಗಿದ್ದು, ಅಪ್ಪ ಅವ್ವ …ನೂರು ವರ್ಷ ಸುಖವಾಗಿ ಬಾಳಿರಿ….ನನ್ನ ನೆನಪಿಸಬೇಡಿರಿ…ನಾನು ಸುಖವಾಗಿ ಇರುತ್ತೇನೆಂದು ಬರೆದಿರೋ ಪುಟ ಸಿಕ್ಕಿದೆ.ಇದು  ವಿದ್ಯಾರ್ಥಿ ಸಾವಿನ ಕುರಿತು ಸಂಶಯ ಮೂಡಿಸಿದೆ.

    ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ವಿದ್ಯಾರ್ಥಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ.

  • ಕುಂದಾಪುರ: ಸುಳ್ಗೋಡು ಸ.ಹಿ.ಪ್ರಾ ಶಾಲಾ ಶಿಕ್ಷಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ  

    ಕುಂದಾಪುರ, ಜುಲೈ 7, 2025ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು.

    ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು.  ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ  ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಶೆಟ್ಟಿ, ಡಿವೈಎಸ್‌ಪಿ ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ, ಪಿಎಸ್‌ಐ ನಾಸೀರ್ ಹುಸೇನ್ ಭೇಟಿ ನೀಡಿದರು.ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿದೆ.

  • ಬಂಟ್ವಾಳ: ಯುವತಿಗೆ ಚೂರಿ ಇರಿದ ಬಳಿಕ ಯುವಕ ಆತ್ಮಹತ್ಯೆ

    ಬಂಟ್ವಾಳ, ಜುಲೈ 7, 2025: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿ ಸೋಮವಾರ ಸಂಭವಿಸಿದೆ.

    ಮೃತ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್(30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ಗುರುತಿಸಲಾಗಿದೆ.

    ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿದುಬಂದಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸಹ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ. ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರುತ್ತದೆ ಎನ್ನಲಾಗಿದ್ದು, ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿದ್ದಿದ್ದು, ಇದನ್ನು ನೋಡಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ದಿವ್ಯಾಳ ಬಾಡಿಗೆ ಮನೆಗೆ ತೆರಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಕುಂದಾಪುರ, ಕಾರ್ಕಳ: ಮದ್ಯಪಾನದ ಚಟದಿಂದ ಖಿನ್ನತೆಗೊಳಗಾದ ಇಬ್ಬರು ಆತ್ಮಹತ್ಯೆ

    ಕುಂದಾಪುರ/ಕಾರ್ಕಳ, ಮೇ 21, 2025: ಕುಂದಾಪುರ ಮತ್ತು ಕಾರ್ಕಳದಲ್ಲಿ ವಿಪರೀತ ಮದ್ಯಪಾನದ ಚಟದಿಂದ ಖಿನ್ನತೆಗೊಳಗಾದ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ದಿನಾಂಕ 19/05/2025 ರಂದು ರಾತ್ರಿಯಿಂದ 20/05/2025 ರ ಬೆಳಗ್ಗೆಯವರೆಗಿನ ಅವಧಿಯಲ್ಲಿ ನಡೆದಿವೆ.

    ಕುಂದಾಪುರ ತಾಲೂಕಿನ ಹಂಗಳೂರು ಗ್ರಾಮದಲ್ಲಿ, 59 ವರ್ಷದ ವ್ಯಕ್ತಿಯೊಬ್ಬರು, ವಿಪರೀತ ಮದ್ಯಪಾನದ ಚಟ ಹಾಗೂ ಬಿಪಿ ಖಾಯಿಲೆಯಿಂದ ಬಳಲುತ್ತಿದ್ದರು. ಖಿನ್ನತೆಗೊಳಗಾಗಿ, ರಾತ್ರಿ 10:00 ಗಂಟೆಯಿಂದ ಬೆಳಗ್ಗೆ 5:30 ಗಂಟೆಯ ನಡುವೆ, ಮನೆಯ ಬಳಿಯ ಬಾವಿಯ ರಾಟಿಯ ಪೈಪ್‌ಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 27/2025, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಇದೇ ರೀತಿಯಾಗಿ, ಕಾರ್ಕಳದ ಹೊಸ್ಮಾರು ಗ್ರಾಮದಲ್ಲಿ, 37 ವರ್ಷದ ಇನ್ನೊಬ್ಬ ವ್ಯಕ್ತಿ, ವಿಪರೀತ ಮದ್ಯಪಾನದ ಅಭ್ಯಾಸವುಳ್ಳವರಾಗಿದ್ದರು. ರಾತ್ರಿ 10:00 ಗಂಟೆಯಿಂದ ಬೆಳಗ್ಗೆ 7:45 ಗಂಟೆಯ ನಡುವೆ, ಮನೆಯೊಳಗಿನ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 28/2025, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಎರಡೂ ಘಟನೆಗಳಲ್ಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

  • ತೆಕ್ಕಟ್ಟೆಯಲ್ಲಿ ದಾರುಣ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ, ತಂದೆ-ಮಗ ಸಾವು, ತಾಯಿ ಸ್ಥಿತಿ ಗಂಭೀರ

    ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ.

    ಸಾಲಬಾಧೆಯಿಂದ ಕಂಗೆಟ್ಟಿದ್ದ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿಗಳಾದ ಮಾಧವ ದೇವಾಡಿಗ (56) ಮತ್ತು ಅವರ ಮಗ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ಗಂಭೀರವಾಗಿರುವ ತಾರಾ ದೇವಾಡಿಗ ಅವರನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ತಂದೆ ಮತ್ತು ಮಗ ಬಾವಿಗೆ ಹಾರಿರುವುದನ್ನು ತಿಳಿದ ತಾಯಿ ತಾರಾ ದೇವಾಡಿಗ ಕೂಡ ಬಾವಿಗೆ ಧುಮುಕಿದ್ದಾರೆ. ಅವರ ಕೂಗು ಕೇಳಿ ಸ್ಥಳೀಯರಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಸೇರಿದಂತೆ ಇತರರು ರಕ್ಷಣೆಗೆ ಧಾವಿಸಿದ್ದಾರೆ. ಮನೆಯಲ್ಲಿ ದೊರೆತ ಡೆತ್ ನೋಟ್‌ನಲ್ಲಿ, ಸಾಲಬಾಧೆಯಿಂದ ಬಡ ಕುಟುಂಬ ಮಾನ-ಮರ್ಯಾದೆಗಾಗಿ ಆತ್ಮಹತ್ಯೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ. ಮಾಧವ ದೇವಾಡಿಗ ಅವರು ಅಂಕದಕಟ್ಟೆಯ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.

    ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕುಂದಾಪುರ: ಕೋಪಮಾಡಿಕೊಂಡ ಯುವಕ ವಾರಾಹಿ ನದಿಗೆ ಹಾರಿ ಆತ್ಮಹತ್ಯೆ

    ಕುಂದಾಪುರ: ಕೋಪಮಾಡಿಕೊಂಡ ಯುವಕನೋರ್ವ ಬಳ್ಳೂರು ಕಳುವಿನಬಾಗಿಲು ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಬಳ್ಳೂರು ಗ್ರಾಮದ ಸ್ವಸ್ತಿಕ್ (21) ಆತ್ಮಹತ್ಯೆಗೆ ಶರಣಾದ ಯುವಕ.

    ಸ್ವಸ್ತಿಕ್ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುವ ಸ್ವಭಾವದವರಾಗಿದ್ದರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬರುವಂತೆ ಹೇಳಿದ್ದಕ್ಕೆ ಕೋಪಗೊಂಡು ಸೈಕಲ್ ತೆಗೆದುಕೊಂಡು ಹೋಗಿದ್ದು ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಸ್ವಸ್ತಿಕ್ ಎಲ್ಲಿಯಾದರೂ ಹೋಗಿರಬಹುದು ವಾಪಾಸ್ಸು ಬರಬಹುದು ಎಂದು ಮನೆಯವರು ಸುಮ್ಮನಿದ್ದರು. ಸ್ವಸ್ತಿಕ್ ನ ಮೃತದೇಹ ಬಳ್ಳೂರು ಕಳುವಿನಬಾಗಿಲು ವಾರಾಹಿ ಹೊಳೆಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮನೆಯವರು ಹಾಗೂ ಇತರರು ಬಂದು ನೋಡಿ ಗುರುತಿಸಿದ್ದಾರೆ.

    ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.