Tag: SV

  • ಗಂಗೊಳ್ಳಿ: ಸುಶ್ಮಿತಾ ಗಾಣಿಗ ಅವರಿಗೆ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನ

    ಗಂಗೊಳ್ಳಿ : ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ೨ನೇ ರ್‍ಯಾಂಕ್ ಪಡೆಯುವ ಮೂಲಕ ಸುಶ್ಮಿತಾ ಗಾಣಿಗ ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವಳ ಈ ಸಾಧನೆ ಪ್ರಶಂಸನೀಯ ಎಂದು ಕುಂದಾಪುರ ವಲಯದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಹೇಳಿದರು.

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್‍ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್.ಗಾಣಿಗ ಅವರನ್ನು ಗಂಗೊಳ್ಳಿಯ ಅವರ ಮನೆಯಲ್ಲಿ ಶಿಕ್ಷಣ ಇಲಾಖೆ ಪರವಾಗಿ ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.
    ಎಸ್ಸೆಸ್ಸೆಲ್ಸಿ ನೋಡೆಲ್ ಅಧಿಕಾರಿ ಶೇಖರ ಪಡುಕೋಣೆ, ಶಿಕ್ಷಣ ಸಂಯೋಜಕ ರಾಜ ಖಾರ್ವಿ ಶುಭ ಹಾರೈಸಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿವಾನಂದ ಗಾಣಿಗ, ಮಮತಾ ಎಸ್.ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.