Tag: Uppunda

  • ಬೈಂದೂರು: ಖಾಸಗಿ ಬಸ್ ಚಾಲಕ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಬೈಂದೂರು, ಮೇ 30, 2025: ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪುಂದದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಖಾಸಗಿ ಬಸ್ ಚಾಲಕನೊಬ್ಬ ಕಾಣೆಯಾದ ಘಟನೆಯ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಪ್ಪುಂದ ನಿವಾಸಿ ನಾಗರಾಜ್, ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೇ 19, 2025ರಂದು ಬೆಳಿಗ್ಗೆ 11:00 ಗಂಟೆಗೆ ಡ್ಯೂಟಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅವರು, ನಂತರ ಮನೆಗೆ ಮರಳಿ ಬಾರದೆ ಕಾಣೆಯಾಗಿದ್ದಾರೆ ಎಂದು ಪಿರ್ಯಾದಿದಾರರಾದ ಹೇಮ ಅವರು ತಿಳಿಸಿದ್ದಾರೆ.

    ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 113/2025ರ ಅಡಿಯಲ್ಲಿ ಮನುಷ್ಯ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ನಾಪತ್ತೆಯಾದ ವ್ಯಕ್ತಿಯ ಹುಡುಕಾಟಕ್ಕೆ ಕ್ರಮ ಕೈಗೊಂಡಿದ್ದಾರೆ.

  • ಉಪ್ಪುಂದ ಮಾದರಿ ಶಾಲೆಯ ಶಿಕ್ಷಕಿ ದೀಪಾ ಎಮ್. ಬಿಲ್ಲವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

    ಬೈಂದೂರು, ಮೇ 23, 2025: ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ 2025ರ ಸಾಲಿನ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಪ್ಪುಂದದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ದೀಪಾ ಎಮ್. ಬಿಲ್ಲವ ಅವರು ಪವರ್‌ಲಿಫ್ಟಿಂಗ್ ಮತ್ತು ವೇಟ್‌ಲಿಫ್ಟಿಂಗ್ ವಿಭಾಗಗಳಲ್ಲಿ ಚಿನ್ನದ ಪದಕ ಗಳಿಸಿ, ಮೇಘಾಲಯದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

  • ಉಪ್ಪುಂದ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

    ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ.

    ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ‌ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.