Tag: VHP

  • Hassan: District Administration Bans VHP and Bajrang Dal Leaders from Entering Sakleshpur for Rally

    Hassan, August 14, 2025 – The Hassan district administration has prohibited Vishwa Hindu Parishad (VHP) and Bajrang Dal leaders Sharan Pumpwell and Puneeth Kerehalli from entering the district for a Panjina procession organized by the two organizations in Sakleshpur town on the evening of August 14, 2025. The order, issued by District Commissioner K.S. Lathakumari, will remain in effect until 8:00 AM on August 15, 2025.

    The ban was imposed to maintain law and order, following concerns that the leaders could deliver provocative speeches during the event. The decision was based on a recommendation by Hassan District Superintendent of Police Muhammad Sujeetha, who advised restricting their entry to prevent potential disturbances. Police are ensuring compliance with the order, and further details regarding the rally are under monitoring.

  • ಉಡುಪಿ: ಎಬಿವಿಪಿ 77ನೇ ಸಂಸ್ಥಾಪನಾ ದಿನಾಚರಣೆ

    ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಜುಲೈ 9ರಂದು ಎಬಿವಿಪಿಯ 77ನೇ ಸಂಸ್ಥಾಪನಾ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲಾಯಿತು. 

    ಬೆಳಗ್ಗೆ 9 ಗಂಟೆಗೆ ಸರಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಕಾರ್ಯಾಲಯ ಕೇಶವ ನಿಲಯದ ಮಾಧವ ಸಭಾಂಗಣದಲ್ಲಿ ಧ್ವಜಾರೋಹಣ ನಡೆಸಿ ನಂತರ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತರಾದ ಡಾ| ಶಿವಾನಂದ ನಾಯಕ್ ಕಳೆದ ಅನೇಕ ದಶಕಗಳಿಂದ ಕಾಲೇಜಿನಲ್ಲಿರುವ ಯುವಕರಲ್ಲಿ ರಾಷ್ಟ್ರ ಪ್ರೇಮದ ಬೀಜವನ್ನು ಬಿತ್ತಿ ರಾಷ್ಟ್ರ ಪುನರ್ನಿರ್ಮಾಣದ ಸಂಕಲ್ಪದ ಕೈಂಕರ್ಯವನ್ನು ಕೈಗೊಳ್ಳುವಂತೆ ಮಾಡುತ್ತಿರುವ ಏಕೈಕ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಂದು ಹೇಳಿದರು.

    ನಗರ ಕಾರ್ಯದರ್ಶಿ ಮಾಣಿಕ್ಯ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಬಿವಿಪಿ ತನ್ನ ಸದಸ್ಯತ್ವದ ಮೂಲಕ ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ ಮತ್ತು ಈ ಬಾರಿಯ ಸದಸ್ಯತ್ವ ಅಭಿಯಾನವು ಇಂದಿನಿಂದ ಪ್ರಾರಂಭವಾಗಲಿದ್ದು ಉಡುಪಿಯ ವಿದ್ಯಾರ್ಥಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಇದರಲ್ಲಿ ಭಾಗವಹಿಸಿ ಈ ಹಿಂದಿನಂತೆ ಮುಂದೆ ನಡೆಯಲಿರುವ ರಚನಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ನಗರ ಉಪಾಧ್ಯಕ್ಷರಾದ ಪ್ರೊ| ಪ್ರವೀಣ್ ಆಚಾರ್ಯ ಅವರ ಉಪಸ್ಥಿತರಿದ್ದರು. ರಾಜ್ಯ ಸಹ ಕಾರ್ಯದರ್ಶಿ ಗಣೇಶ್ ಪೂಜಾರಿ, ಜಿಲ್ಲಾ ಸಂಚಾಲಕ ಶ್ರೇಯಸ್ ಅಂಚನ್,  ಕರ್ನಾಟಕ ದಕ್ಷಿಣ ಪ್ರಾಂತದ ಸಾಮಾಜಿಕ ಜಾಲತಾಣ ಪ್ರಮುಖ್ ನವೀನ್, ನಗರ ಸಹ ಕಾರ್ಯದರ್ಶಿ ಶಿವನ್,  ಹಾಗೂ ಹಿರಿಯ ಕಾರ್ಯಕರ್ತರಾದ ಆಶೀಷ್ ಶೆಟ್ಟಿ ಬೋಳ ಮತ್ತು ಅಜಿತ್ ಜೋಗಿ ಮತ್ತು ಪ್ರಮುಖರಾದ ಮನೀಶ್, ಸ್ವಸ್ತಿಕ್, ಅಂಕಿತಾ, ಮನು, ಲ್ಯಾರಿ, ಕಿಶೋರ್, ಹೃಷಿತ್ ಸೇರಿದಂತೆ ಇತರೆ ಕಾರ್ಯಕರ್ತರು ಭಾಗವಹಿಸಿದ್ದರು. 

  • ಪ್ರಚೋದನಾಕಾರಿ ಹೇಳಿಕೆ ಪ್ರಕರಣ: ಶರಣ್ ಪಂಪ್‌ವೆಲ್ ವಿರುದ್ಧ ಬಂಧನ ಸಹಿತ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

    ಬೆಂಗಳೂರು, ಜುಲೈ 9, 2025: ಪ್ರಚೋದನಾಕಾರಿ ಹೇಳಿಕೆ ಪ್ರಕರಣ ಸಂಬಂಧ ಉಡುಪಿ ಪೊಲೀಸರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಲವಂತದ ಬಂಧನ ಅಥವಾ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ ಶರಣ್ ಪಂಪ್ ವೆಲ್ ಸಲ್ಲಿಸಿದ ಎಫ್ಐಆರ್ ರದ್ದುಗೊಳಿಸುವ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

    ವಿಚಾರಣೆಯಲ್ಲಿ ಪೊಲೀಸರಿಗೆ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ ಪೀಠ, ಶರಣ್ ಪಂಪ್ ವೆಲ್‌ಗೆ ಪೊಲೀಸರ ತನಿಖೆಯಲ್ಲಿ ಸಹಕರಿಸುವಂತೆ ತಾಕೀತು ಮಾಡಿದೆ. ಶರಣ್ ವಿರುದ್ಧ ದ್ವೇಷ ಭಾಷಣದ ಆರೋಪ ಇಡಲಾಗಿದ್ದು, ಈ ಪ್ರಕರಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಅವರ ಪರ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದ್ದರು. ಈ ವಾದವನ್ನು ಆಲಿಸಿ ಹೈಕೋರ್ಟ್ ತೀರ್ಪು ನೀಡಿದೆ.

    ಇನ್ನೊಂದೆಡೆ, ಕಡಬ ಪೊಲೀಸರ ಎಫ್ಐಆರ್‌ಗೆ ಸವಾಲು ಎದುರಿಸಿದ ವಿಎಚ್‌ಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ನವೀನ್ ಸಲ್ಲಿಸಿದ ಅರ್ಜಿಯ ವಿಚಾರಣೆಯಲ್ಲಿ, ಹೈಕೋರ್ಟ್ ಎಫ್ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರುಣ್ ಶ್ಯಾಮ್ ತಮ್ಮ ವಾದದಲ್ಲಿ, ಯಾವುದೇ ಅಪರಾಧಾಂಶವಿಲ್ಲದೆ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದರು. ಈ ವಾದವನ್ನು ಪರಿಗಣಿಸಿ ಪೀಠ ತಡೆಯಾಜ್ಞೆ ಘೋಷಿಸಿದೆ.

  • ಪ್ರಜಾಪ್ರಭುತ್ವದ ಕಗ್ಗೊಲೆ – ಶರಣ್ ಪಂಪುವೆಲ್ ಮೇಲೆ ಕೇಸ್ ಖಂಡನೀಯ: ವಿಎಚ್‌ಪಿ

    ಉಡುಪಿ, ಜುಲೈ 7, 2025: ಗೋ ಹತ್ಯೆ ಮಾಡಿ ಗೋವಿನ ರುಂಡವನ್ನು ಎಸೆದಿರುವ ಕೃತ್ಯವನ್ನು ಖಂಡಿಸಿ ಪತ್ರಿಕಾ ಹೇಳಿಕೆಗೆ ಶರಣ್ ಪಂಪವೆಲ್ ರವರ ಮೇಲೆ ಕೇಸ್ ದಾಖಲಿಸಿರುದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಕಳೆದ ಕೆಲವು ದಶಕಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಗೋಕಳ್ಳತನ /ಗೋಹತ್ಯೆ / ಅಕ್ರಮ ಗೋಸಾಗಾಟದ ಹಿಂದೆ ವ್ಯವಸ್ಥಿತ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇಡೀ ಕರಾವಳಿಯ ಜನತೆಗೆ ತಿಳಿದಿರುವ ವಿಷಯ, ಆದರೆ ಯಾರದು ಒತ್ತಡಕ್ಕೆ ಮಣಿದು ಅಥವಾ ರಾಜಕೀಯ ತುಷ್ಟಿಕರಣಕ್ಕಾಗಿ ಆ ಹೇಳಿಕೆಯನ್ನು ಕಾರಣವಾಗಿಟ್ಟು ಕೊಂಡು ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ, ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ದಕ್ಕೆಯಾವುದರ ಜೊತೆಗೆ, ಇದರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಆದುದರಿಂದ ತಕ್ಷಣ ಪೊಲೀಸ್ ಇಲಾಖೆ ಹಾಕಿರುವ ಕೇಸನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ.

    ಶರಣ್ ಪಂಪವೆಲ್ ರವರಿಗೆ ಚಿಕ್ಕಮಗಳೂರು ಜಿಲ್ಲೆ ನಿರ್ಬಂಧ – ಆದೇಶ ಹಿಂಪಡೆಯಲು ಆಗ್ರಹ

    ಸಂಘಟನಾ ಕಾರ್ಯಕ್ಕೆ ಮತ್ತು ಕಾರ್ಯಕ್ರಮ ದೃಷ್ಟಿಯಿಂದ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು ಖಂಡನೀಯ, ಓಲೈಕೆ ರಾಜಕಾರಣಕೋಸ್ಕರ ಹಿಂದೂ ನಾಯಕರನ್ನು ಧಮನಿಸುವ ಕೃತ್ಯವನ್ನು ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಮಾಡುತ್ತಿದ್ದು, ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ ಮತ್ತು ತಕ್ಷಣ ಈ ಆದೇಶವನ್ನು ಹಿಂದೆ ಪಡೆಯುವಂತೆ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ ಆರ್ ಪ್ರಕಟಣೆಯಲ್ಲಿ ತಿಳಿಸಿದರು.

  • ಉಡುಪಿ: ವಿಹಿಂಪ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಉಡುಪಿ, ಜುಲೈ 4, 2025: ಕುಂಜಾಲು ಗ್ರಾಮದಲ್ಲಿ ಇತ್ತೀಚೆಗೆ ವರದಿಯಾದ ಗೋವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮುದಾಯಿಕ ಕಲಹವನ್ನು ಪ್ರಚೋದಿಸುವ ರೀತಿಯಲ್ಲಿ ಭಡಕವಾದ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಹಿಂಪ) ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

    ದೂರಿನ ಪ್ರಕಾರ, ಆರೋಪಿ ಶರಣ್ ಪಂಪ್‌ವೆಲ್ ಅವರು ತನಿಖೆ ಪೂರ್ಣಗೊಳ್ಳುವ ಮೊದಲೇ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ಸಾಮುದಾಯಿಕ ಸೌಹಾರ್ದತೆಗೆ ಧಕ್ಕೆ ತರುವಂತಹ ಭಾವನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಅವರು ತಪ್ಪು ಮಾಹಿತಿಯನ್ನು ಹರಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಸಾರ್ವಜನಿಕ ಶಾಂತಿಗೆ ಭಂಗ ತಂದು ಅಶಾಂತಿಯನ್ನು ಸೃಷ್ಟಿಸುವ ಸಾಧ್ಯತೆಯಿದೆ. ಅವರ ಹೇಳಿಕೆಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ವೈಮನಸ್ಸನ್ನು ಪ್ರಚೋದಿಸುವ ಉದ್ದೇಶದಿಂದ ಕೂಡಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

    ತನಿಖೆಯ ಸೂಕ್ಷ್ಮ ಹಂತದಲ್ಲಿ ಇಂತಹ ಹೇಳಿಕೆಗಳು ಜವಾಬ್ದಾರಿಯಿಲ್ಲದವು ಮಾತ್ರವಲ್ಲ, ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ಅಪಾಯಕಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಈ ವಿಷಯದ ಬಗ್ಗೆ ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

    ಈ ಆರೋಪಗಳ ಆಧಾರದ ಮೇಲೆ, ಉಡುಪಿ ಟೌನ್ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಮಂಗಳೂರು: ಕದ್ರಿ ಪೊಲೀಸರಿಂದ ಶರಣ್ ಪಂಪ್‌ವೆಲ್ ಅರೆಸ್ಟ್‌, ಜಾಮೀನು

    ಮಂಗಳೂರು, 27 ಮೇ, 2025: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮಂಗಳೂರು ಬಂದ್‌ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ನನ್ನು ಕದ್ರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

    ಬಂಧನದ ಸುದ್ದಿ ಹರಡುತ್ತಿದ್ದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು. ಪೊಲೀಸರ ಕ್ರಮವನ್ನು ಕಾರ್ಯಕರ್ತರು ಖಂಡಿಸಿದರು. ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಚದುರಿಸಿದರು.

    ನಂತರ ಶರಣ್ ಪಂಪ್‌ವೆಲ್‌ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಅಪ್ಡೇಟ್:

    ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿ ಆದೇಶಿಸಿದರು.

  • ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ – ಹಿಂದೂ ಕಾರ್ಯಕರ್ತರ ವಿರುದ್ದ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

    ಮಂಗಳೂರು ಮೇ 06: ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಬಜ್ಪೆ ಪೊಲೀಸ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ಅವರ ಪಾತ್ರ ಇದೆ ಎಂದು ಸಾಮಾಜಿಕ ಜಾಲತಾಣದಗಳಲ್ಲಿ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್ಟೇಬಲ್‌ ರಶೀದ್‌ ಎಂ. ಶೇಕ್‌ ದೂರು ನೀಡಿದ್ದಾರೆ. ಈ ಸಂಬಂಧ ಮೂಡುಬಿದಿರೆಯ ಸಮಿತ್‌ರಾಜ್‌ ಧರೆಗುಡ್ಡೆ ಮತ್ತು ಹಿಂದೂ ಜಾಗರಣ ವೇದಿಕೆಯ ಮುಖಂಡ ಉಲ್ಲಾಸ್‌ ಟಿ. ಎಂಬವರ ವಿರುದ್ಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಿಂದೂ ಜಾಗರಣ ವೇದಿಕೆಯ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್​ ಕಾನ್ಸ್​ಟೇಬಲ್ ರಶೀದ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.