Tag: Work

  • ಕುಂದಾಪುರ: ಬಾವಿ ಕೆಲಸದ ವೇಳೆ ದುರಂತ – ವ್ಯಕ್ತಿಯೊಬ್ಬರು ಮುಳುಗಿ ಸಾವು

    ಕುಂದಾಪುರ, ಮೇ 29, 2025: ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಸುಭಾಷ್ (50) ಎಂಬ ವ್ಯಕ್ತಿಯು ಬಾವಿ ಕೆಲಸದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋಪಾಡಿ ಗ್ರಾಮದ ಮೂಡುಗೋಪಾಡಿಯಲ್ಲಿ ನಡೆದಿದೆ. ದೂರುದಾರರಾದ ಅವರ ಪುತ್ರ ಅಭಿಷೇಕ್ (20) ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ಸುಭಾಷ್ ಅವರು ತಮ್ಮ ಅಣ್ಣ ಸುರೇಂದ್ರ ಜೊತೆಗೆ ಕಳೆದ ಮೂರು ತಿಂಗಳಿಂದ ಗೋಪಾಡಿ ಗ್ರಾಮದ ಕರುಣಾಕರ ಎಂಬುವವರ ಜಾಗದಲ್ಲಿ ಬಾವಿ ತೋಡುವ ಕೆಲಸದಲ್ಲಿ ತೊಡಗಿದ್ದರು. ದಿನಾಂಕ 28/05/2025ರಂದು ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಸುಭಾಷ್, ಮಧ್ಯಾಹ್ನ 1:45 ಗಂಟೆ ಸುಮಾರಿಗೆ ಬಾವಿಯ ರಿಂಗ್ ಬದಿಯಲ್ಲಿ ಜಲ್ಲಿ ಕಲ್ಲುಗಳನ್ನು ಹಾಕಲು ಅಳವಡಿಸಿದ್ದ ಪಿವಿಸಿ ಪೈಪ್ ಬಾವಿಯೊಳಗೆ ಬಿದ್ದಿತ್ತು. ಇದನ್ನು ತೆಗೆಯಲು ಬಾವಿಗೆ ಇಳಿದಿದ್ದ ವೇಳೆ, ಪೈಪ್ ಸಿಗದೇ, ಪುನಃ ಮೇಲೆ ಬರಲು ಹಗ್ಗದ ಸಹಾಯದಿಂದ ಹತ್ತುತ್ತಿರುವಾಗ ಆಕಸ್ಮಿಕವಾಗಿ ಹಗ್ಗವು ಕೈಯಿಂದ ಜಾರಿ ಬಾವಿಯ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.

    ಈ ಘಟನೆಯ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 30/2025ರಡಿ, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

  • ಕಾನೂನಿನ ಉಲ್ಲಂಘನೆ; ಸೌದಿ ಅರೇಬಿಯಾದಲ್ಲಿ ಒಂದೇ ವಾರದಲ್ಲಿ 17,153 ಜನರ ಬಂಧನ..!

    ದಮಾಮ್: ಸೌದಿ ಅರೇಬಿಯಾದಲ್ಲಿ ರೆಸಿಡೆನ್ಸಿ, ಉದ್ಯೋಗ ಮತ್ತು ಗಡಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು 17,153 ಜನರನ್ನು ಬಂಧಿಸಿದ್ದಾರೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

    ವಾಸಸ್ಥಳ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಟ್ಟು 10,305 ಜನರನ್ನು, ಅಕ್ರಮವಾಗಿ ಗಡಿ ದಾಟಲು ಪ್ರಯತ್ನಿಸಿದ್ದಕ್ಕಾಗಿ 3,644 ಜನರನ್ನು ಮತ್ತು ಕಾರ್ಮಿಕ ಕಾನೂನು ಉಲ್ಲಂಘನೆಗಾಗಿ 3,204 ಜನರನ್ನು ಬಂಧಿಸಲಾಗಿದೆ. ಅಕ್ರಮವಾಗಿ ದೇಶವನ್ನು ಪ್ರವೇಶಿಸಲು ಪ್ರಯತ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟ 1,109 ಜನರಲ್ಲಿ 62 ಪ್ರತಿಶತದಷ್ಟು ಇಥಿಯೋಪಿಯನ್ನರು, 35 ಪ್ರತಿಶತದಷ್ಟು ಯೆಮೆನ್ ಮತ್ತು 3 ಪ್ರತಿಶತದಷ್ಟು ಇತರ ರಾಷ್ಟ್ರಗಳಿಗೆ ಸೇರಿದವರು.